ಡಾ.ಪ್ರೀತಿ ಶುಭಚಂದ್ರಗೆ ಚಾವುಂಡರಾಯ ಪ್ರಶಸ್ತಿ

Dr Preethi Shubhachandra
Published on

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2023ನೇ ಸಾಲಿನ ಚಾವುಂಡರಾಯ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ.ಪ್ರೀತಿ ಶುಭಚಂದ್ರ ಅವರು ಪುರಸ್ಕೃತರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಮಿತಿ ಸಭೆಯಲ್ಲಿ ಡಾ.ಪ್ರೀತಿ ಶುಭಚಂದ್ರ ಅವರನ್ನು ಆಯ್ಕೆ ಮಾಡಲಾಯಿತು.
ಡಾ.ಪ್ರೀತಿ ಶುಭಚಂದ್ರ ಅವರು 40ಕ್ಕೂ ಅಧಿಕ ಜೈನ ಸಾಹಿತ್ಯಕ್ಕೆ ಸಂಬಂಧಿಸಿದ ಸಂಶೋಧನಾ ಲೇಖನಗಳನ್ನು ಹಾಗೂ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾಗಿ, ಮೊದಲ ಮಹಿಳಾ ನಿರ್ದೇಶಕಿಯಾಗಿ ಹಾಗೂ ಮಹಿಳಾ ಅಧ್ಯಯನ ಕೇಂದ್ರದ ಗೌರವ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಪರಿಷತ್ತಿನಲ್ಲಿ ಈ ದತ್ತಿ ಸ್ಥಾಪಿಸಿದ್ದು, ಪ್ರಾಚೀನ ಜೈನ ಸಾಹಿತ್ಯ ಆಧರಿಸಿ ಆಧುನಿಕ ಕನ್ನಡ ಭಾಷೆಯಲ್ಲಿ ರಚಿಸಿದ ಪ್ರಬಂಧ, ಸಂಶೋಧನೆ, ವಿಮರ್ಶೆ, ಕಾದಂಬರಿ, ನಾಟಕ, ಕಥಾಸಾಹಿತ್ಯ ಪ್ರಕಾರಗಳ ಲೇಖಕರಿಗೆ, ಗ್ರಂಥ ಸಂಪಾದಕರಿಗೆ ಇಲ್ಲವೆ ಕನ್ನಡ ಸಾಹಿತ್ಯಕ್ಕೆ ವಿಶೇಷವಾಗಿ ಬಹು ಆಯಾಮದ ಕೊಡುಗೆಯನ್ನಿತ್ತ ಹಿರಿಯ ಸಾಹಿತಿಯನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net