

ಹುಬ್ಬಳ್ಳಿ: ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಗಳಿಸಬಹುದೆಂದು ನಂಬಿಸಿದ ಅಪರಿಚಿತರು, ಧಾರವಾಡದ ಮಹಿಳಾ ವೈದ್ಯರೊಬ್ಬರಿಂದ 5.06 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಟೆಲಿಗ್ರಾಂ ಮೂಲಕ ಸಂರ್ಪಸಿದ ಅಪರಿಚಿತರು, ನಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ನೀವು ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಲಿದ್ದೀರಿ ಎಂದು ನಂಬಿಸಿದ್ದಾರೆ. ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಂದ 5,06,470 ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.