ಜನರ ಜೀವನಮಟ್ಟ ಸುಧಾರಣೆಗೆ ಜೆಜೆಎಂ ಸಹಕಾರಿ

kundana
ಜಲ ಜೀವನ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.
Published on

ವಿಜಯವಾಣಿ ಸುದ್ದಿಜಾಲ ಕುಂದಾಣ
ಭಾರತದ ಎಲ್ಲ ಗ್ರಾಮೀಣ ಪ್ರದೇಶಗಳ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಜಾರಿಗೆ ತಂದಿದೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ನಿವೃತ ಕಾರ್ಯ ಪಾಲಕ ಇಂಜಿನಿಯರ್ ತಿರಕನಗೌಡ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಕುಂದಾಣ, ಆಲೂರು ದುದ್ದನಹಳ್ಳಿ, ಪಂಡಿತಪುರ, ದೊಡ್ಡಚೀಮನ ಹಳ್ಳಿ ಗ್ರಾಮದಲ್ಲಿನ ಜಲ ಜೀವನ್ ಮಿಷನ್ ಯೋಜನೆಯಡಿ ರೂಪಿಸಿಲಾದ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಗ್ರಾಮೀಣ ಜನರ ಜೀವನ ಮಟ್ಟದಲ್ಲಿ ಸುಧಾರಣೆ ತರಲು ಹಾಗೂ ಶುದ್ಧ ನೀರು ಪೂರೈಸುವ ನಿಟ್ಟಿನಲ್ಲಿ ಇಲಾಖೆ ಕೈಗೊಂಡಂತಹ ಕಾಮಗಾರಿಗಳನ್ನು ಪರಿಶೀಲಿಸಿ, ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗಕ್ಕೆ ಪಾರದರ್ಶಕವಾಗಿ ತಲುಪಿಸುವುದೇ ಇದರ ಉದ್ದೇಶವಾಗಿದೆ. ಆಯಾ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ತೆಗೆ ಚರ್ಚಿಸಿ, ಕಾಮಗಾರಿ ಗುಣಮಟ್ಟ ಪರಿಶೀಲಿಸಲಾಗಿದೆ ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಭರತ್ ವಾತನಾಡಿ, ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯನ್ನು ರಾಜ್ಯ ಸರ್ಕಾರ ಮನೆ-ಮನೆಗೆ ಗಂಗೆ ಯೋಜನೆಯಾಗಿ ಜಾರಿಗೆ ತಂದಿದೆ. ಇದು ಕರ್ನಾಟಕದ ಗ್ರಾಮೀಣ ಭಾಗದ ಪ್ರತಿ ಮನೆಗಳಿಗೂ ನಳ ಸಂಪರ್ಕದ ಮೂಲಕ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರು ಗ್ರಾಮಸ್ಥರಿಗೆ ಪೂರೈಸಲು ಅಗತ್ಯ ಸೌಕರ್ಯ ಕಲ್ಪಿಸಿದೆ. ತಾಲೂಕಿನಲ್ಲಿ ಜೆಜೆಎಂ ಅಡಿ ಕೈಗೊಂಡಂತಹ ಎಲ್ಲ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸುವ ಸಲುವಾಗಿ ರಾಜ್ಯಮಟ್ಟದ ಅಧಿಕಾರಿಗಳ ತಂಡ ಇಂದು ಗ್ರಾಮೀಣ ಭಾಗಕ್ಕೆ ಭೇಟಿ ನೀಡಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net