4.80 ಲಕ್ಷ ರೂ., 20 ತೊಲೆ ಚಿನ್ನ ವಶಕ್ಕೆ

2 HPT 2
ಹೊಸಪೇಟೆಯ ಭುವನಹಳ್ಳಿ ಬಳಿ ಕಾರಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 4 ಲಕ್ಷ ರೂ. ಗಳನ್ನು ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ವಶಕ್ಕೆ ಪಡೆದರು.
Published on

ಹೊಸಪೇಟೆ: ಜಿಲ್ಲೆಯ ಎರಡು ಪ್ರತ್ಯೇಕ ಚೆಕ್‌ಪೋಸ್ಟ್‌ಗಳಲ್ಲಿ ಭಾನುವಾರ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ತೊಲೆ ಬಂಗಾರ ಮತ್ತು 4.80 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊಸಪೇಟೆಯ ಟಿಬಿ ಡ್ಯಾಂ ಚೆಕ್‌ಪೋಸ್ಟ್ ಮಾರ್ಗವಾಗಿ ಸಾಗುತ್ತಿದ್ದ ಕಾರು ತಪಾಸಣೆ ನಡೆಸಿದ ಪೊಲೀಸರು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ತೊಲೆ ಚಿನ್ನ ಮತ್ತು 80 ಸಾವಿರ ರೂ. ವಶಕ್ಕೆ ಪಡೆದಿದ್ದಾರೆ. ಕಾರು ಮಂತ್ರಾಲಯದಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಟಿಬಿ ಡ್ಯಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಭುವನಹಳ್ಳಿ ಚೆಕ್‌ಪೋಸ್ಟ್ ಬಳಿ ಅನಧಿಕೃತವಾಗಿ ಸಾಗಿಸುತ್ತಿದ್ದ 4 ಲಕ್ಷ ರೂ.ಗಳನ್ನು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ಈ ಹಣವನ್ನು ಸಾಗಿಸಲಾಗುತ್ತಿತ್ತು. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net