ನಾರಾವಿಯ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

nnnnnnnnnnnnn
Published on


ಮಂಗಳೂರು : ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಾರಾವಿಯಲ್ಲಿ ನಿರ್ಮಿಸಿರುವ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಉಪಸ್ಥಿತರಿದ್ದರು. ಬಳಿಕ ಬೆಳ್ತಂಗಡಿಯ ಕಜಕೆ- ಮಲವಂತಿಗೆ ಸರ್ಕಾರಿ ಶಾಲೆಯ ಮತಗಟ್ಟೆ, ಎಳನೀರು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net