

ರೋಣ: ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಿಎಎಂಎಸ್ ಸೀಟುಗಳ ಸಂಖ್ಯೆ ೬೦ರಿಂದ ೧೦೦ಕ್ಕೆ ಹೆಚ್ಚಳವಾಗಿದೆ ಎಂದು ಪ್ರಾಚಾರ್ಯ ಐ.ಬಿ. ಕೊಟ್ಟೂರಶೆಟ್ಟರ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷವೇ ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಪ್ರವೇಶಾತಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಕೇಂದ್ರ ನಮ್ಮ ಮನವಿ ಪರಿಶೀಲಿಸಿ, ಪರಿವೀಕ್ಷಣಾ ಸಮಿತಿಗಳ ಮೂಲಕ ನಮ್ಮಲ್ಲಿರುವ ಸೌಲಭ್ಯಗಳನ್ನು ದೃಢಪಡಿಸಿಕೊಂಡಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ೧೦೦ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.