ಶ್ರೇಯಸ್ ಪಟೇಲ್ ಪರ ಜಯಘೋಷ

04-06-HNPP 001
ಹೊಳೆನರಸೀಪುರ ಕನಕ ವೃತ್ತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿಗೆ ಹಿನ್ನೆಲೆಯಲ್ಲಿ ಸಂಭ್ರಮ ಆಚರಿಸಲಾಯಿತು.
Published on

ಹೊಳೆನರಸೀಪುರ : ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಜಯ ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದರು.


ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶ್ರೇಯಸ್ ಪಟೇಲ್ ಪರವಾಗಿ ಜಯಘೋಷ ಕೂಗಿದ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಜತೆಗೆ ಪಟಾಕಿ ಸಿಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿನ ಕಾರ್ಯಕರ್ತರು ತಮ್ಮ ಬೈಕ್‌ಗಳಿಗೆ ಕಾಂಗ್ರೆಸ್ ಬಾವುಟ ಕಟ್ಟಿಕೊಂಡು ಪಟ್ಟಣದ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಿದರು. ಪಟ್ಟಣದ ಕನಕ ವೃತ್ತದಲ್ಲಿ ಮಲ್ಲಪ್ಪನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಮೋಹನ್ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಕಾಂಗ್ರೆಸ್ ಮುಖಂಡರಾದ ಮೋಹನ್, ಹೊನ್ನವಾರ ಗ್ರಾಮದ ದಯಾನಂದ್ ಸೇರಿದಂತೆ ಸಾವಿರಾರು ಜನ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಮನೆ ಮುಂದೆ ಜಮಾಯಿಸಿದ್ದರು. ಅವರ ಗೆಲುವಿಗೆ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net