

ವಿಜಯವಾಣಿ ಸುದ್ದಿಜಾಲ ಕುಶಾಲನಗರ
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಶುಕ್ರವಾರ ಚಿರತೆ ಪ್ರತ್ರಯಕ್ಷವಾಗಿ ನಿವಾಸಿಗಳ ಆತಂಕ ಹೆಚ್ಚಿಸಿದೆ.
ನವಗ್ರಾಮದಲ್ಲಿ ಅಂಗನವಾಡಿ ಬಳಿ ಮೂವರು ವಾಯು ವಿಹಾರಕ್ಕೆ ತೆರಳಿದ್ದ ಸಂದರ್ಭ
ಚಿರತೆ ಕಂಡಿದೆ. ಈ ಬಗ್ಗೆ ನಿವಾಸಿಗಳಾದ ಶಶಿ, ಗಾಯತ್ರಿ ಎಂಬವರು ವಾರ್ಡ್ ಸದಸ್ಯ ಕೆ.ಬಿ.ಶಂಶುದ್ದೀನ್ ಮತ್ತು ವಲಯ ಅರಣ್ಯಾಧಿಕಾರಿ ರತನ್ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.