

ಬೆಳಗಾವಿ: ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ತಡರಾತ್ರಿ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ 1.50 ಕೋಟಿ ರೂ.ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನೆರೆಯ ಮಹಾರಾಷ್ಟ್ರದಮುಂಬೈನಿಂದ ಸಾರಿಗೆ ಖಾಸಗಿಬಸ್ ನಲ್ಲಿ ಬೆಳಗಾವಿ ಕಡೆ ಬರುತ್ತಿರುವ ಸಂದರ್ಭದಲ್ಲಿಕೊಗನೊಳ್ಳಿಚೆಕ್ ಪೋಸ್ಟ್ ನಲ್ಲಿ ಬಸ್ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಆದರೆ, ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.