‘ಚೆಕ್ಕೇರ ಕಪ್ ಕ್ರಿಕೆಟ್’ ಆರು ತಂಡ ಮುನ್ನಡೆ

13 gkp 002.
Published on

 ಗೋಣಿಕೊಪ್ಪಲು: ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯಲ್ಲಿ 6 ತಂಡಗಳು ಮುನ್ನಡೆ ಸಾಧಿಸಿವೆ.

ಬಾಚಮಾಡ ಮತ್ತು ಮಂಡಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಮಂಡಂಗಡ ತಂಡ ನಿಗದಿತ 8 ಓವರ್‌ಗಳಲ್ಲಿ 1ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬಾಚಮಾಡ ತಂಡ ಎಲ್ಲ ವಿಕೆಟ್ ಕಳೆದುಕೊಂಡು 43 ರನ್ ಗಳಿಸಲಷ್ಟೇ ಶಕ್ತವಾಯ್ತು.

ಬೋಳಂದಂಡ ಮತ್ತು ಐಚೋಡಿಯಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಐಚೋಡಿಯಂಡ ತಂಡ ನಿಗದಿತ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ಬೋಳಂದಂಡ ತಂಡ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಇಟ್ಟೀರ ಮತ್ತು ಕೊಕ್ಕೆಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕೊಕ್ಕೆಂಗಡ ನಿಗದಿತ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 87 ರನ್ ಗಳಿಸಿತು. ಇಟ್ಟೀರ ತಂಡ 6.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಕುಂದ್ರಂಡ ಮತ್ತು ನಾಗಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ನಾಗಂಡ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿತು. ಕುಂದ್ರಂಡ ತಂಡ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಚೌರೀರ ಮತ್ತು ತೆನ್ನೀರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಚೌರೀರ ತಂಡ ನಿಗದಿತ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟವಿಲ್ಲದೆ 61 ರನ್ ಗಳಿಸಿತು. ತೆನ್ನೀರ ತಂಡ 5 ವಿಕೆಟ್ ನಷ್ಟಕ್ಕೆ 31 ರನ್ ಗಳಿಸಿ 23 ರನ್ ಗಳಿಂದ ಸೋಲು ಕಂಡಿತು.

ಕೋದಂಡ ಮತ್ತು ಚೊಟ್ಟಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಚೊಟ್ಟಂಗಡ ತಂಡ ನಿಗದಿತ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 126 ರನ್ ಗಳಿಸಿತು. ಕೋದಂಡ ತಂಡ 8 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಲಷ್ಟೇ ಶಕ್ತವಾಯ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net