ಮಾಜಿ ಸಚಿವ ಎನ್.ಚಲುವರಾಯಸ್ವಾಮಿಗೆ ಕರೊನಾ...!

Crs
Published on

ಮಂಡ್ಯ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲದಿದ್ದರೂ ಅ.26ರಂದು ಪರೀಕ್ಷೆಗೊಳಪಡಲಾಗಿತ್ತು. ಈ ವೇಳೆ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸದಲ್ಲಿಯೇ ಕ್ವಾರಂಟೈನ್‌ಗೆ ಒಳಪಟ್ಟಿರುವ ಅವರು, ವೈದ್ಯರ ಸೂಚನೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಆದಷ್ಟು ಬೇಗ ತಮ್ಮ ನಾಯಕ ಸೋಂಕಿನಿಂದ ಚೇತರಿಸಿಕೊಳ್ಳಲಿ ಎಂದು ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net