ಕುಶಾಲನಗರದಲ್ಲಿ ಗ್ರಾಹಕ ವಸ್ತುಗಳ ಮೇಳ

chembar
Published on

ಕುಶಾಲನಗರ:

ಇಲ್ಲಿನ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಇದೇ ಪ್ರಥಮ ಬಾರಿಗೆ ಸೆ.6 ರಂದು ಶನಿವಾರ ಸ್ಥಳೀಯ ಎಸ್‌ಎಲ್‌ಎನ್ ಟೈಮ್ ಸ್ಕ್ವೇರ್ ಆವರಣದಲ್ಲಿ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಎಸ್. ನಾಗೇಶ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ನಡೆಯುತ್ತಿರುವ ಈ ಬೃಹತ್ ಮೇಳದಲ್ಲಿ ವಿವಿಧ ಕಾರು ಹಾಗೂ ಬೈಕ್ ಕಂಪನಿಗಳು ಭಾಗವಹಿಲಿವೆ. ಜತೆಗೆ ಹೋಂ ಅಪ್ಲೈಯನ್ಸ್ ಸೇರಿದಂತೆ ಸುಮಾರು 70ಕ್ಕೂ ಅಧಿಕ ವಿವಿಧ ಸ್ಟಾಲ್‌ಗಳು ಇರಲಿವೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಬೆಳಗ್ಗೆ 10 ಗಂಟೆಗೆ ಉದ್ಯಮಿ ಎಲ್.ಎನ್. ಅಜಯ್ ಸಿಂಗ್ ಮೇಳ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ, ಉದ್ಯಮಿ ವಿಶ್ವನಾಥನ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು, ಮಡಿಕೇರಿ ಲೀಡ್ ಬ್ಯಾಂಕ್ ಮ್ಯಾನೇಜರ್ ಗಂಗಾಧರ್ ನಾಯಕ್, ಕೊಡಗು ಸಿಒಸಿ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಭಾಗವಹಿಸಲಿದ್ದಾರೆ.

ಕುಶಾಲನಗರ ವರ್ತಕರು ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಿ ಮೇಳದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ವಿವಿಧ ಕಾರು ಕಂಪನಿಗಳು ತಮ್ಮ ಹೊಸ ಕಾರುಗಳನ್ನು ಇಲ್ಲಿ ಬಿಡುಗಡೆ ಮಾಡಲಿದ್ದಾರೆ. ಜಿಲ್ಲೆಯ ವಿವಿಧ ಬ್ಯಾಂಕ್‌ಗಳು ಭಾಗವಹಿಸಲಿವೆ. ಮೈಸೂರು ನಾರಾಯಣ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಕೂಡ ನಡೆಯಲಿದೆ ಎಂದರು.

ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಕಾರ್ಯದರ್ಶಿ ಚಿತ್ರರಮೇಶ್, ಖಜಾಂಚಿ ಎನ್.ವಿ.ಬಾಬು, ಉಪಾಧ್ಯಕ್ಷ ಎಂ.ಡಿ. ರಂಗಸ್ವಾಮಿ,

ನಿರ್ದೇಶಕರಾದ ಪೊನ್ನಚ್ಚನ ಮೋಹನ್, ಎಂ.ಕೆ. ದಿನೇಶ್, ಅಬ್ದುಲ್ ರಷೀದ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net