ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ಗುರುವಾರ ಸಹಾಯಧನದ ಚೆಕ್ ವಿತರಿಸಲಾಯಿತು.
ವಿವಿಧ ಸಮಸ್ಯೆಗಾಗಿ ಶೇ.25 ಮತ್ತು ಶೇ.5 ರ ನಿಧಿಯಲ್ಲಿ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಈ ಚೆಕ್‌ಗಳನ್ನು ವಿತರಣೆ ಮಾಡಿದರು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಪಂಚಾಯಿತಿ ನೌಕರರು, ಗ್ರಾಮಸ್ಥರು ಇದ್ದರು.