ರೆಂಜಾಳ ಶಾಲೆಯಲ್ಲಿ ಚೆಸ್ ಟೂರ್ನಿ

chess
ತಾಲೂಕು ಮಟ್ಟದ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಿತು
Published on

ಕಾರ್ಕಳ: ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾಟ ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಸಂಸ್ಕೃತಿ ಸಿಂಚನದ ಸಂಚಾಲಕ ರಾಜೇಶ್ ರೆಂಜಾಳ ಉದ್ಘಾಟಿಸಿದರು.

ರೆಂಜಾಳ ಗ್ರಾಪಂ ಅಧ್ಯಕ್ಷ ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕ್ರೀಡಾ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಮಂಜೊಟ್ಟು ರಮೇಶ್ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿ ಸಂತೋಷ್ ಶೆಟ್ಟಿ, ಉಮೇಶ್ ಆಚಾರ್ಯ, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪದಾಧಿಕಾರಿಗಳು, ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ, ಪ್ರಶಾಂತ್ ಹೆಗ್ಡೆ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಪರಿಷತ್ ಸದಸ್ಯ ರಾಜಾರಾಂ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಸ್ವರ್ಣಲತಾ ಸ್ವಾಗತಿಸಿದರು. ವಿಶಾಲಾಕ್ಷಿ ವಂದಿಸಿದರು. ಶಿಕ್ಷಕ ವಿನಾಯಕ ನಾಯಕ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net