

ಹಾವೇರಿ: ಹೋಳಿ ಆಚರಣೆಯ ಕರ್ತವ್ಯಕ್ಕೆ ನಿಯೋಜಿಸಿದ್ದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಎದೆನೋವಿನಿಂದ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ನಗರದ ಬಸ್ತಿಓಣಿಯ ನಿವಾಸಿ ನಾಗರಾಜ ಹನುಮಂತಪ್ಪ ಚೂರಿ (39) ಮೃತ ಗೃಹ ರಕ್ಷಕ ದಳದ ಸಿಬ್ಬಂದಿ.
ಇವರು ಮಾ. 13ರಂದು ನಗರದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡಿದ್ದ ಸೋಗಿನ ಬಂಡಿ ಉತ್ಸವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.