ಚೇತನ್ ರಾಠೋಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

9 Dwd 6 Chetan Rathod
Published on

ಧಾರವಾಡ: ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟçಮಟ್ಟದ ಕಬಡ್ಡಿ ಆಯ್ಕೆ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ವಾಣಿಜ್ಯ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಬಿಎ ಪ್ರಥಮ ವಿದ್ಯಾರ್ಥಿ ಚೇತನ್ ರಾಠೋಡ ಕರ್ನಾಟಕ ವಿಶ್ವವಿದ್ಯಾಲಯದ ಬ್ಲೂ ಹಾಗೂ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಕ್ಕೆ ಆಯ್ಕೆ ಆಗಿದ್ದಾನೆ. ವಿದ್ಯಾರ್ಥಿಯನ್ನು ಮಂಡಳದ ಪದಾಧಿಕಾರಿಗಳು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net