

ಅರಕಲಗೂಡು : ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಹಲವಾರು ಸುಧಾರಣೆ ಜಾರಿಗೆ ತಂದ ಮಹಾನ್ ಚೇತನ ಎಂದು ಬಿಇಒ ನಾರಾಯಣ್ ತಿಳಿಸಿದರು.
ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿ.ದೇವರಾಜ ಅರಸು ಅವರು ಶಿಕ್ಷಣ ಮುಗಿಸಿ ರಾಜಕೀಯ ಕ್ಷೇತ್ರಕ್ಕೆ ಬಂದು ಹಲವು ಸುಧಾರಣೆಗಳನ್ನು ಮಾಡಿದರು. ಅದರಲ್ಲೂ ಮುಖ್ಯವಾಗಿ ವೃದ್ಧಪ್ಯಾ ವೇತನ, ಪೌಷ್ಟಿಕ ಆಹಾರ, ಉಚಿತ ನಿವೇಶನ, ಭಾಗ್ಯಜ್ಯೋತಿ ಎಂಬ ಬಡವರ ಯೋಜನೆಗಳ ಜತೆಗೆ ಸಹಕಾರಿ ಸಂಘಗಳನ್ನು ಸ್ಥಾಪಿಸಿ ಇಡೀ ಸಮಾಜಕ್ಕೆ ಬೆಳಕಾದರು ಎಂದರು.
ಭೂ ಸುಧಾರಣೆಯಂತಹ ಹಲವು ಕಾರ್ಯಕ್ರಮಗಳನ್ನು ತರುವ ಮೂಲಕ ನಾಡನ್ನು ಮುನ್ನಡೆಸಿದರು. ಅವರ ದೂರ ದೃಷ್ಟಿ ಅಪಾರವಾದುದು. ನಾವೆಲ್ಲ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯೋಣ. ಅವರ ತತ್ವ, ಆದರ್ಶಗಳನ್ನು ಎಲ್ಲರು ಮೈಗೂಡಿಸಿಕೊಳ್ಳೊಣಾ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಡಿ.ದೇವರಾಜ ಅರಸು ವಂಶಸ್ಥರಾದ ಕೃಷ್ಣರಾಜೇ ಅರಸ್ ಅವರನ್ನು ಸನ್ಮಾನಿಸಲಾಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ, ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೃಷ್ಣೇಗೌಡ, ಪಟ್ಟಣ ಪಂಚಾಯಿತಿ ಸದಸ್ಯೆ ರಶ್ಮಿ, ಬಿ.ಎಂ.ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವಿಕುಮಾರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಕವಿತಾ, ಲೋಕೋಪಯೋಗಿ ಇಲಾಖೆ ಎಇಇ ಬಿಂಧುಶ್ರೀ ಇತರರು ಇದ್ದರು.