ಛತ್ರಪತಿ ಶಿವಾಜಿ, ಸರ್ವಜ್ಞ ಜಯಂತಿ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ. 19ರಂದು ಬೆಳಗ್ಗೆ 11 ಗಂಟೆಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಭಾರತ ಪ್ರೌಢಶಾಲೆಯ ಆವರಣದಲ್ಲಿರುವ ಮರಾಠಾ ವಿದ್ಯಾ ಪ್ರಸಾರಕ ಮಂಡಳದಲ್ಲಿ ಹಾಗೂ ಫೆ. 20ರಂದು ಬೆಳಗ್ಗೆ 11 ಗಂಟೆಗೆ ಸಂತಕವಿ ಸರ್ವಜ್ಞ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಕಾರಿ ಗೀತಾ ಸಿ.ಡಿ. ಹೇಳಿದರು.

ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ರೂಪುರೇಷೆಗಳನ್ನು ತಿಳಿಸಿದರು. ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net