ಕೋಳಿ ಅಂಕ ನಡೆಸಲು ಅವಕಾಶವಿಲ್ಲ ದ.ಕನ್ನಡ ಎಸ್ಪಿ ಸೂಚನೆ

chicken fight
Published on

ಮಂಗಳೂರು: ಕೋಳಿ ಅಂಕ ಕಾನೂನುಬಾಹಿರ ಅಪರಾಧವಾಗಿದ್ದು ಕೋಳಿ ಅಂಕ ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ದ.ಕ ಎಸ್‌ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.


ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net