ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಭೇಟಿ

udp-22-election officer
Published on

ಉಡುಪಿ: ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಮನೋಜ್​ ಕುಮಾರ್​ ಮೀನಾ ಬುಧವಾರ ಬ್ರಹ್ಮಗಿರಿಯ ಸೈಂಟ್​ ಸಿಸಿಲೀಸ್​ ವಿದ್ಯಾಸಂಸ್ಥೆಯ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸೈಂಟ್​ ಸಿಸಿಲೀಸ್​ ವಿದ್ಯಾಸಂಸ್ಥೆಯಲ್ಲಿ ಮತಯಂತ್ರಗಳನ್ನು ಭದ್ರತೆಯಲ್ಲಿ ಇಟ್ಟಿರುವ ಸ್ಟ್ರಾಂಗ್​ ರೂಂ, ಸಿ.ಸಿ.ಟಿ.ವಿ ಕ್ಯಾಮೆರಾಗಳ ವೀಕ್ಷಣಾ ಕೇಂದ್ರ, ವಿವಿಧ ಹಂತಗಳಲ್ಲಿ ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಮತ ಎಣಿಕೆಗೆ ನಡೆಸಿರುವ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಿಂದ ಮಾಹಿತಿ ಪಡೆದ ಅವರು, ಪ್ರತಿ ಎರಡು ಮತ ಎಣಿಕೆ ಟೇಬಲ್​ಗೆ ಸಿ.ಸಿ.ಟಿ.ವಿ ಅಳವಡಿಕೆ ಆಗಬೇಕು ಹಾಗೂ ಮಹಡಿಗಳ ಮೇಲೆ ಮತ ಎಣಿಕೆ ಕೇಂದ್ರಗಳ ಮೆಟ್ಟಿಲುಗಳಿಗೂ ಸಿ.ಸಿ.ಟಿ.ವಿ ಅಳವಡಿಸುವಂತೆ ಸೂಚನೆ ನೀಡಿದರು. ಐ.ಜಿ.ಪಿ ಬೋರಲಿಂಗಯ್ಯ, ಎಸ್​.ಪಿ ಡಾ. ಅರುಣ್​ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net