

ಮೈಸೂರು: ಚೀಫ್ ಜಿಸ್ಟೀಸ್ ಹೊಂಬೇಗೌಡ ಸ್ಮಾರಕ ಮೈಸೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಗೋಲ್ಡ್ ಕಪ್ ಫುಟ್‌ಬಾಲ್ ಪಂದ್ಯಾವಳಿಗೆ ಗುರುವಾರ ಚಾಲನೆ ದೊರೆಯಿತು.
ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಫಿಸಿಕಲ್ ಎಜುಕೇಷನ್ ಟೀಚರ್ಸ್ ಅಕಾಡೆಮಿ ಟ್ರಸ್ಟ್ ವತಿಯಿಂದ ಮೈಸೂರು ವಿವಿ ಫುಟ್‌ಬಾಲ್ ಮೈದಾನದಲ್ಲಿ ಆಯೋಜಿಸಿರುವ ಪಂದ್ಯಾವಳಿಗೆ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಕೃಷ್ಣ ಚಾಲನೆ ನೀಡಿದರು. ಬಳಿಕ ಕ್ರೀಡಾಪಟುಗಳಿಗೆ ಶುಭಕೋರಿದರು.
ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಪಿ.ಕೃಷ್ಣಯ್ಯ, ಪಂದ್ಯಾವಳಿ ಸಂಚಾಲಕ ಡಾ.ಎಚ್.ಎಸ್.ಕೃಷ್ಣಕುಮಾರ್, ಎಲ್.ಮಂಜುನಾಥ್, ಡಾ.ಬಿ.ಸದಾಶಿವ ಭಟ್ ಇತರರಿದ್ದರು. ಪಂದ್ಯಾವಳಿಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು, ಪಂದ್ಯಾವಳಿಯು ಆಗಸ್ಟ್ 8 ರವರೆಗೆ ನಡೆಯಲಿದೆ.