

ಬೆಂಗಳೂರು: ಬಿಜೆಪಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದ ದಾವಣಗೆರೆಗೆ ಹೊರಟಿದ್ದಾರೆ. ರಸ್ತೆ ಮೂಲಕ ದಾವಣಗೆರೆಗೆ ಸಿಎಂ ಪ್ರಯಾಣ ಬೆಳೆಸಿರುವ ಸಿಎಂ ಸಂಜೆ 7 ಗಂಟೆಗೆ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇಂದು ರಾತ್ರಿ ದಾವಣಗೆರೆಯಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ, ನಾಳೆ ಬೆಳಗ್ಗೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೂ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿಯಾಗಲಿದ್ದಾರೆ.