

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ಸಂಜೆ ನಗರಕ್ಕೆ ಆಗಮಿಸಿದರು.
ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ವಾಗತಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್ ಇತರರು ಇದ್ದರು. ಬಳಿಕ ಗೌರವ ವಂದನೆ ಸ್ವೀಕರಿಸಿದ ಬಳಿಕ ಸಾ.ರಾ.ಕನ್ವೆಂಷನ್ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಬಳಿಕ ವಾಪಸ್ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.