ಮುಖ್ಯಮಂತ್ರಿ ಸಿದ್ದರಾಮಯ್ಯಗೂ ತಪಾಸಣೆ ಬಿಸಿ

Published on

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಮಾಡಲು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ತಪಾಸಣೆಯ ಬಿಸಿ ತಟ್ಟಿದೆ.
ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಎಚ್ಚರ ವಹಿಸಿರುವ ಚುನಾವಣಾ ಆಯೋಗ, ಎಲ್ಲೆಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ರಾಜಕಾರಣಿಗಳ ವಾಹನ ಸೇರಿದಂತೆ ಅನುಮಾನ ಬಂದ ವಾಹನಗಳ ತಪಾಸಣೆ ಮಾಡುತ್ತಿದೆ.
ನಂಜನಗೂಡು ತಾಲೂಕಿನ ವರುಣ ಕ್ಷೇತ್ರ ಹಾಗೂ ತಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಭಾಷಣ ಮುಗಿಸಿ ನಗರಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಾವಲು ವಾಹನಗಳನ್ನು ಮೈಸೂರು ಹೊರ ವಲಯದ ಚಿಕ್ಕಹಳ್ಳಿ ಬಳಿ ನಿರ್ಮಿಸಿರುವ ಚೆಕ್‌ಪೋಸ್ಟ್‌ನಲ್ಲಿ ತಡೆದು ತಪಾಸಣೆ ನಡೆಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಹಾಗೂ ಬೆಂಗಾವಲು ವಾಹನ ತಪಾಸಣೆಗೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಹಕಾರ ನೀಡಿದರು. ತಪಾಸಣೆ ಕಾರ್ಯ ಮುಗಿದ ಬಳಿಕ ವಾಹನ ಮುಂದೆ ಸಾಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net