ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಒತ್ತಾಯ

24Anand2
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮುರುೇಂದ್ರಗೌಡ ಪಾಟೀಲ, ಗೀತಾ ಸುತಾರ, ಸಂದೀಪ ದೇಶಪಾಂಡೆ, ಬಸನಗೌಡ ಕೂಳದೂರ, ಸಂತೋಷ ದೇಶನೂರ ಇತರರಿದ್ದರು.
Published on

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ಧ ೋಷಣೆ ಕೂಗಿ ರಾಜೀನಾಮೆಗೆ ಆಗ್ರಹಿಸಿದರು. ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ಮಾತನಾಡಿ, ಸಿದ್ದರಾಮಯ್ಯ ಸ್ವತಃ ವಕೀಲರಾಗಿದ್ದಾರೆ. ಸಂವಿಧಾನಕ್ಕೆ ಗೌರವ ನೀಡಿ ಕೂಡಲೇ ರಾಜೀನಾಮೆ ನೀಡಬೇಕು. ಯಾವುದೇ ತಪ್ಪು ಮಾಡಿಲ್ಲವಾದರೆ ಧೈರ್ಯವಾಗಿ ಪ್ರಕರಣ ಎದುರಿಸಿ ಆರೋಪ ಮುಕ್ತರಾಗಬೇಕು. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ನೈತಿಕತೆ ಇಲ್ಲ. ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಬಿಜೆಪಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮುಖಂಡರಾದ ಅನಿಲ ಬೆನಕೆ, ಮುರುೇಂದ್ರಗೌಡ ಪಾಟೀಲ, ಸಂದೀಪ ದೇಶಪಾಂಡೆ, ಬಸನಗೌಡ ಕೂಳದೂರ, ಸಂತೋಷ ದೇಶನೂರ, ಯುವರಾಜ ಜಾಧವ, ಧನಂಜಯ ಜಾಧವ, ಗೀತಾ ಸುತಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net