ಕೆರೆಗೆ ನೀರು ತಂಬಿಸಿ ರೈತರಿಗೆ ಉತ್ತೇಜನ

C JAJUR MLA 22 (2)
Published on

ಚಿಕ್ಕಜಾಜೂರು: ಸರ್ಕಾರದಿಂದ 1200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ಭರವಸೆ ನೀಡಿದರು.

ಚಿಕ್ಕಜಾಜೂರು, ಅಪ್ಪರಸನಹಳ್ಳಿ, ಪಾಡಿಗಟ್ಟೆ, ಮೇಕೆನಟ್ಟಿ, ಅರಸಘಟ್ಟ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದಲ್ಲಿ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ತೀವ್ರ ಬರಗಾಲ ಆವರಿಸಿ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಕೃಷಿ ಕಾರ್ಯಕ್ಕೆ ಉತ್ತೇಜನ ನೀಡಲು ಕೆರೆ ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಜಿಪಂ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಎಲ್.ಬಿ.ರಾಜಶೇಖರ್ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಹನುಮಂತಪ್ಪ, ಬಿಜೆಪಿ ಮುಖಂಡ ಡಿ.ಸಿ.ಮೋಹನ್, ಗುತ್ತಿಗೆದಾರ ರಾಜಶೇಖರ್, ಆನಂದಪ್ಪ, ಶಿವಕುಮಾರ್, ಪ್ರಾಣೇಶ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net