

ಚಿಕ್ಕಬಳ್ಳಾಪುರ: ಕೋಟ್ಪಾ ದಾಳಿ ಮತ್ತು ಅರಿವು ಕಾರ್ಯಕ್ರಮಗಳನ್ನು ಹೆಚ್ಚಿಗೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಸೂಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಕೈಗೊಂಡಿದ್ದ ತಂಬಾಕು ನಿಯಂತ್ರಣ ಕಾರ್ಯಕ್ರಮದ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಸಂದಣಿಯ ಸಾರ್ವಜನಿಕ ಸ್ಥಳಗಳಲ್ಲಿ ವಾರಕ್ಕೊಮ್ಮೆ ಎರಡು ಬಾರಿ ಕಡ್ಡಾಯವಾಗಿ ಕಾರ್ಯಾಚರಣೆ ಕೈಗೊಂಡು ಪರಿಣಾಮಕಾರಿಯಾಗಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಸೇವನೆಯನ್ನು ನಿಯಂತ್ರಿಸಬೇಕು ಎಂದರು.
ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ತಿಂಗಳಿಗೆ ಕನಿಷ್ಠ 10 ಕೋಟ್ಪಾ ದಾಳಿ ನಡೆಸಬೇಕು. ಶಾಲಾ ಕಾಲೇಜುಗಳ ಕಟ್ಟಡದಿಂದ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣ ನಿಷೇಧಿಸಿದ್ದು ನಿಯಮ ಉಲ್ಲಂನೆಗೆ ಅವಕಾಶ ನೀಡಬಾರದು. ತಪ್ಪು ಕಂಡು ಬಂದಲ್ಲಿ ಅಂಗಡಿಗಳ ಪರವಾನಗಿಯನ್ನು ಕೂಡಲೆ ರದ್ದುಗೊಳಿಸಬೇಕು ಎಂದರು.
ಪೌರಕಾರ್ಮಿಕರಿಗೆ ಪ್ರತಿ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ನಡೆಸುವಾಗ ಕ್ಯಾನ್ಸರ್ ರೋಗ ಪರೀೆ ಕೈಗೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿ.ಪಂ.ಉಪಕಾರ್ಯದರ್ಶಿ ಅಥಿಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ಮಾಧವಿ, ಡಿಎಚ್ಒ ಡಾ ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣ ಪ್ರಸಾದ್, ಅಬಕಾರಿ ಇಲಾಖೆಯ ಅಧೀಕ್ಷಕ ಜೆ. ದೀಪಕ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಬಿ.ಎಂ ನರೇಶ್ ಬಾಬು, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಗಂಗರೆಡ್ಡಿ ಮತ್ತಿತರರು ಇದ್ದರು.
*ಅಕ್ರಮ ಹೋಮ್ ಸ್ಟೇಗಳಿಗೆ ಕಡಿವಾಣ*
ಜಿಲ್ಲೆಯ ಯಾವುದೇ ಭಾಗದಲ್ಲಿ ಪರವಾನಗಿ ಇಲ್ಲದೇ ಹೋಮ್ ಸ್ಟೇಗಳನ್ನು ನಡೆಸುವಂತಿಲ್ಲ. ಒಂದು ವೇಳೆ ಅಕ್ರಮ ಕೇಂದ್ರಗಳು ಕಂಡು ಬಂದಲ್ಲಿ ನಿರ್ದಾಣ್ಯ ಕ್ರಮ ಕೈಗೊಳ್ಳಲು ಎಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ನಂದಿಬೆಟ್ಟದ ಸುತ್ತಮುತ್ತಲ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಸ್ಥಳಿಯಾಡಳಿತ ಸಂಸ್ಥೆಗಳ ಮುಖ್ಯಸ್ಥರು, ಪಿಡಿಒ ಆಯಾ ವ್ಯಾಪ್ತಿಯಲ್ಲಿ ಪರಿಶೀಲಿಸಿ, ಮಾಹಿತಿ ಸಂಗ್ರಹಿಸಬೇಕು. ಫಾಮ್ರ್ ಹೌಸ್ ಗಳಲ್ಲಿ ಹೋಂ ಸ್ಟೇಗಳು ನಡೆಯುವ ಸಾಧ್ಯತೆ ಇದ್ದು ಇದಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ನಿಗಾವಹಿಸಬೇಕು ಎಂದು ತಿಳಿಸಿದರು.