ಫಲ ಕೈ ಕೊಡದ ತಂತ್ರಗಾರಿಕೆ, ಲೀಡ್ ತಂದುಕೊಡುವಲ್ಲಿ ವಿಫಲ

3CBP3
Published on

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಯುವ ವರ್ಚಸ್ಸಿನ ಲಾಭದ ನಿರೀಕ್ಷೆಯ ಜತೆಗೆ ಸಚಿವದ್ವಯರು, ಸ್ವಪಕ್ಷೀಯ ಶಾಸಕರ ತಂತ್ರಗಾರಿಕೆಯು ಕೈ ಕೊಟ್ಟಿರುವುದು ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ.

ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ ಎಂ.ಸಿ.ಸುಧಾಕರ್, ಕಾಂಗ್ರೆಸ್ ಶಾಸಕರಾದ ಪ್ರದೀಪ್ ಈಶ್ವರ್, ಎಸ್.ಎನ್.ಸುಬ್ಬಾರೆಡ್ಡಿ, ಶರತ್ ಬಚ್ಚೇಗೌಡ, ಎನ್.ಶ್ರೀನಿವಾಸಯ್ಯ ಮತ್ತು ಕೈ ಪರ ಇದ್ದ ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಸ್ವಪಕ್ಷೀಯ ಅಭ್ಯರ್ಥಿಗೆ ಪ್ರತಿಸ್ಪರ್ಧಿಗಿಂತಲೂ ಹೆಚ್ಚಿನ ಮತಗಳನ್ನು ತಂದುಕೊಡುವಲ್ಲಿ ವಿಫಲರಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಸ್ಥಳೀಯ ಅಭಿವೃದ್ಧಿ ಕೆಲಸಗಳ ಪ್ರಚಾರದ ನಡುವೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಾಂಪ್ರದಾಯಿಕ ಮತಗಳನ್ನು ಪಡೆಯುವುದಕ್ಕಷ್ಟೇ ಪಕ್ಷವು ಸೀಮಿತವಾಗಿದೆ. ಇದರಿಂದ ಹೆಚ್ಚಿನ ಮತಗಳ ಲೀಡ್ ಅಂತರದಲ್ಲಿ ಕಾಂಗ್ರೆಸ್ ಸೋಲು ಕಂಡಿದೆ.

* ಚಿಕ್ಕಬಳ್ಳಾಪುರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವು ಯೋಜನೆಗಳ ರೂಪುರೇಷೆಗಳೊಂದಿಗೆ ಚುನಾವಣೆಯನ್ನು ಎದುರಿಸಲಾಯಿತು. ಇನ್ನು ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಜನರು ನೀಡಿರುವ ತೀರ್ಪನ್ನು ಗೌರವಿಸುತ್ತೇನೆ.

ರಕ್ಷಾ ರಾಮಯ್ಯ, ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net