ಕೇಂದ್ರ ಸರ್ಕಾರದಲ್ಲಿ ಸಂಸದ ಡಾ ಕೆ.ಸುಧಾಕರ್ ಗೆ ಸಿಕ್ತು  ಮಹತ್ವದ ಜವಾಬ್ದಾರಿ

FB_IMG_1727432163691.jpg
Published on

ಚಿಕ್ಕಬಳಾಪುರ: ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ.
ಡಾ.ಕೆ.ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

"ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ.
"2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ" ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net