ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಲು, ನುಡಿದಂತೆ ನಡೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ಒತ್ತಾಯ

IMG_4494
ಚಿಕ್ಕಬಳ್ಳಾಪುರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರಾಮಲಿಂಗಪ್ಪ ಮಾತನಾಡಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಕ್ತ ಮುನಿಯಪ್ಪ, ತಾ.ಪಂ.ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್, ಮಾಜಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ ಮತ್ತಿತರರು ಇದ್ದರು.
Published on

ಚಿಕ್ಕಬಳ್ಳಾಪುರ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರದೀಪ್ ಈಶ್ವರ್ ನುಡಿದಂತೆ ನಡೆದುಕೊಳ್ಳಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಒತ್ತಾಯಿಸಿದೆ.

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಶಾಸಕರು ಲೀಡ್ ವಿಚಾರವಾಗಿ ಹಾಕಿದ ಸವಾಲನ್ನು ಸ್ವೀಕರಿಸಲಾಗಿತ್ತು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಮತ ಮಾತ್ರವಲ್ಲ, 5 ರಿಂದ 10 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಅನ್ನು ಬಿಜೆಪಿ ಪಡೆಯಲಿದೆ ಎಂಬುದಾಗಿ ಬಹಿರಂಗವಾಗಿ ಹೇಳಲಾಗಿತ್ತು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಈ ಕ್ಷೇತ್ರವೊಂದರಲ್ಲಿಯೇ 20 ಸಾವಿರಕ್ಕೂ ಹೆಚ್ಚು ಮತಗಳ ಲೀಡನ್ನು ಎನ್‌ಡಿಎ ಅಭ್ಯರ್ಥಿ ಡಾ ಕೆ.ಸುಧಾಕರ್ ಪಡೆದಿದ್ದಾರೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಮುಗಿದು ಒಂದು ತಿಂಗಳಿನಲ್ಲಿಯೇ ಆಡಳಿತರೂಢ ಶಾಸಕರ ವಿರುದ್ಧ ಜನ ಅಸಮಾಧಾನಗೊಂಡಿರುವುದನ್ನು ಲೋಕಸಭಾ ಚುನಾವಣಾ ಫಲಿತಾಂಶ ಸಾಬೀತುಪಡಿಸಿದೆ. ಈಗ ನುಡಿದಂತೆ ಶಾಸಕರು ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

* ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ರಾಜೀನಾಮೆ ಸಲ್ಲಿಕೆಯ ಲೆಟರ್ ಹೆಡ್ ಪತ್ರ ನಕಲಿ. ವದಂತಿಗಳನ್ನು ಜನರು ನಂಬಬಾರದು. ಚಿಕ್ಕಬಳ್ಳಾಪುರ ಜನರ ಪ್ರೀತಿ ವಿಶ್ವಾಸ ನಂಬಿಕೆ ಮೇಲೆ ಆಯ್ಕೆಯಾಗಿದ್ದು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ.

ಶಾಸಕ ಪ್ರದೀಪ್ ಈಶ್ವರ್ ಕಚೇರಿ ಪ್ರಕಟಣೆ,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net