ನೀರಾವರಿಗಾಗಿ ಪ್ರಧಾನಿ ಮೋದಿ ಭೇಟಿ ಮಾಡಿದ ಸಂಸದ ಡಾ.ಕೆ.ಸುಧಾಕರ್

26cbp2-1.jpg
Published on

ಚಿಕ್ಕಬಳ್ಳಾಪುರ: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸಂಸದ ಡಾ ಕೆ.ಸುಧಾಕರ್ ಭೇಟಿ‌ ಮಾಡಿ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿ ಕುರಿತಂತೆ ಚರ್ಚಿಸಿದ್ದಾರೆ.
ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ತುರ್ತು ಅಗತ್ಯವಿದೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಈ ಹಿಂದೆ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮಳೆ ನೀರಿನ ಸಂರಕ್ಷಣೆ ಹಾಗು ಅಂತರ್ಜಲ ಮರುಪೂರಣ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಕೈಗೊಂಡ ಯೋಜನೆಗಳು ಹಾಗೂ ಉಪಕ್ರಮಗಳು ಬಗ್ಗೆ ವಿವರಿಸಿ, ಮಳೆಯಾಶ್ರಿತ ಪ್ರದೇಶವಾಗಿರುವ ನಮ್ಮ ಕರ್ನಾಟಕದ ಬಯಲುಸೀಮೆ ಜಿಲ್ಲಗಳಲ್ಲಿಯೂ ಸಹ ಇದೇ ಮಾದರಿಯನ್ನು ಅನುಸರಿಸುವಂತೆ ಪ್ರಧಾನಿಗಳು ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net