ಕಪ್ಪು ಹಲಗೆ ಮೇಲೆ ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ

Teacher
Published on

ಚಿಕ್ಕಬಳ್ಳಾಪುರ: ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ ಚಂದ್ರಶೇಖರ್(೩೨) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಚಂದ್ರಶೇಖರ್​ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆಯಲಾಗಿದೆ.

ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net