ಮಾದಕ ವಸ್ತು ಸೇವನೆ ವಿರೋಧಿ ಜಾಗೃತಿ, ಬೈಕ್‌ ಓಡಿಸಿದ ಅಧಿಕಾರಿಗಳು

ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ರ್ಯಾಲಿ
ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ರ್ಯಾಲಿ
Published on

ಚಿಕ್ಕಬಳ್ಳಾಪುರ:ಮಾದಕ ವಸ್ತುಗಳ ಸೇವನೆ ವಿರೋಧಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ಬೈಕ್‌ ರ್ಯಾಲಿ ನಡೆಸಲಾಯಿತು.

ಪೊಲೀಸ್‌ಅಧಿಕಾರಿಗಳು ಹಾಗೂ ಸಿಬ್ಬಂಧೀ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನಗಳಲ್ಲಿ ಬಜಾರ್‌ರಸ್ತೆ, ಗಂಗಮ್ಮನಗುಡಿ ರಸ್ತೆ, ಎಂ.ಜಿ.ರಸ್ತೆ, ಬಿ.ಬಿ.ರಸ್ತೆಯಲ್ಲಿ ಸಾಗಿದರು. ಇನ್ನುಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ಸ್ಟಿಕರ್‌ ಗಳ ಅಂಟಿಸಿ, ಜಾಗೃತಿ ಮೂಡಿಸಲಾಯಿತು.

ಮಾದಕ ವಸ್ತುಗಳುಆರೋಗ್ಯವನ್ನು ನಾಶಪಡಿಸುತ್ತದೆ. ಇದರಿಂದ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯವಾಗದೇ ತೊಂದರೆಅನುಭವಿಸಬೇಕಾಗುತ್ತದೆ. ಇದಕ್ಕೆ ಪ್ರತಿಯೊಬ್ಬರು ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆನೀಡಲಾಯಿತು. ಮಾದಕ ವಸ್ತುಗಳ ಸೇವನೆ, ಸಾಗಣೆತಡೆಯಲು ಬಿಗಿ ಕ್ರಮ ಕೈಗೊಳ್ಳುವುದರ ಜತೆಗೆ ಜಾಗೃತಿ ಮೂಡಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾಕಾಲೇಜುಗಳು, ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಜನಸ್ನೇಹಿ ಚಟುವಟಿಕೆ ಕೈಗೊಳ್ಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net