ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಕ್ಲೀನರ್ ಗೆ ಕಠಿಣ ಶಿಕ್ಷೆ

ಪೋಕ್ಸೋ ಸಾಂದರ್ಭಿಕ ಚಿತ್ರ
ಪೋಕ್ಸೋ ಸಾಂದರ್ಭಿಕ ಚಿತ್ರ
Published on
ಚಿಕ್ಕಬಳ್ಳಾಪುರ: ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ ದಂಡವನ್ನು ನ್ಯಾಯಾಲಯ ವಿಧಿಸಿದೆ.
ಬಾಗೇಪಲ್ಲಿ ತಾಲೂಕಿನ ಗೊಂದಿಹಳ್ಳಿಯ ಕ್ಲೀನರ್ ಲಕ್ಷಣ (28 ವರ್ಷ) ಅಪರಾಧಿ.
ಕಳೆದ 2022 ನೇ ಸಾಲಿನ ಮೇ.30 ರಂದು ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ದೂರು ಸಲ್ಲಿಕೆಯಾಗಿತ್ತು. ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಾಗ ಅಪಹರಣಕ್ಕೊಳಗಾದ ಅಪ್ರಾಪ್ತ ಬಾಲಕಿ ಪತ್ತೆಯಾಗಿದ್ದು ಇದೇ ವೇಳೆ ಅಪ್ರಾಪ್ತೆಯನ್ನು ಅಪಹರಿಸಿ, ಬಾಲ್ಯ ವಿವಾಹ ಮಾಡಿಕೊಂಡು, ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿತ್ತು. ಚೇಳೂರು ವೃತ್ತ ನಿರೀಕ್ಷಕರಾಗಿದ್ದ ರವಿಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶೆ ಲತಾ ಕುಮಾರಿ ಅಪರಾಧಿಗೆ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ಥೆಯ ಪರವಾಗಿ ಸರ್ಕಾರಿ ಅಭಿಯೋಜಕ ಲಕ್ಷ್ಮೀನರಸಿಂಹಪ್ಪ ಸಮರ್ಥ ಮಂಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net