

ಬೀರೂರು: ಪಟ್ಟಣದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅನಧಿಕೃತವಾಗಿಶೆಡ್ ನಿರ್ಮಾಣಕ್ಕೆ ಮುಂದಾಗಿದ್ದರೂ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೀರೂರು ರೈಲ್ವೆ ಸ್ಟೇಷನ್ ಸಾರ್ವಜನಿಕರು ಹಾಗೂ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಪ್ರಮುಖ ರಸ್ತೆಯಾಗಿದೆ. ಇಂತಹ ರಸ್ತೆಯಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಿಸುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ನಿರ್ಮಾಣ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆ ಅನುಮತಿ ಪಡೆಯುವುದು ಅಗತ್ಯ. ಆದರೆ ಇಲ್ಲಿ ಅನಧಿಕೃತ ಶೆಡ್ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಕಟ್ಟಡ, ಶೆಡ್ ನಿರ್ಮಾಣಗಳಿಗೆ ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುವ ಆತಂಕವಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಶೆಡ್ ನಿರ್ಮಾಣಕ್ಕೆ ಅನುಮತಿ ಇದೆಯೇ ಎಂಬುದನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ಕಾನೂನು ಬದ್ಧ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯವಾಗಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಅನಧಿಕೃತ ಶೆಡ್ ನಿರ್ಮಾಣದ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುವುದು ನಾಗರಿಕರ ಆಗ್ರಹವಾಗಿದೆ.