ಸಿಎಂ ಹುದ್ದೆ ಖಾಲಿ ಇಲ್ಲ, 2028 ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ

ಚಿಂತಾಮಣಿಯಲ್ಲಿ ಕೈಗೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಭಾಗಿ.
ಚಿಂತಾಮಣಿಯಲ್ಲಿ ಕೈಗೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಭಾಗಿ.
Published on
ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಪ್ರಸ್ತುತ ಸಿಎಂ ಕುರ್ಚಿ ಖಾಲಿ ಇಲ್ಲ. 2028 ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದು ವಕ್ಫ್ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಚಿಂತಾಮಣಿ-ಬೆಂಗಳೂರು ರಸ್ತೆಯ ಚಿನ್ನಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾವಣೆಯು ನಮ್ಮಿಂದ ಹಾಗೂ ನಿಮ್ಮಿಂದ ಸಾಧ್ಯವಿಲ್ಲ. ಇದರ ಪವರ್‌ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಲ್ಲಿದೆ. ಇದು ಏನು ಸೂಚನೆ ನೀಡುತ್ತದೆಯೋ? ಅದನ್ನು ಪಾಲಿಸಬೇಕಾಗಿದ್ದು ನನ್ನ ಅಭಿಪ್ರಾಯವನ್ನು ನಾನು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಗೆ ಎಲ್ಲ ರಾಜ್ಯಗಳಲ್ಲೂ ಡಿಮ್ಯಾಂಡ್ ಇದೆ. ಅವರಿಗೆ ಚುನಾವಣೆ ನಡೆಸುವ ತಂತ್ರ ಚೆನ್ನಾಗಿ ಗೊತ್ತಿದೆ. ಈ ಕಾರಣದಿಂದಾಗಿ ಅವರಿಗೆ ಅಸ್ಸಾಂನ ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.
2019 ರಿಂದ 2023 ರವರೆಗೂ ಆಡಳಿತದಲ್ಲಿ ಬಿಜೆಪಿ ಸರ್ಕಾರ ಇತ್ತು. ಇವರ ಆಡಳಿತದಲ್ಲಿ ಸ್ಲಂ ಬೋರ್ಡ್ ನಲ್ಲಿ ಒಂದು ಮನೆ ಕೊಟ್ಟಿದ್ದರೆ, ನಾನು ರಾಜಕೀಯದಿಂದ ನಿವೃತ್ತಿಪಡೆಯುವೆ, ಬೇಕಾದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ನಾನು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ಸಹ ನಾವು ಉಚಿತವಾಗಿ ಮನೆಗಳನ್ನು ಕೊಡುತ್ತೇವೆ ಎಂದು ಹೇಳಿರಲಿಲ್ಲ ಎಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net