ಕಾನೂನು ಕಠಿಣ ನಿಯಮಗಳು, ಪೊಲೀಸ್ ಬಿಗಿ ಪಹರೆ ಹಾಗೂ ವ್ಯಾಪಕ ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಅಪ್ರಾಪ್ತರ ಶೋಷಣೆ ಮಾತ್ರ ನಿಂತಿಲ್ಲ. ಶಾಲೆ, ಮನೆ ಸೇರಿದಂತೆ ಹಲವೆಡೆ ಪ್ರಕರಣಗಳು ವರದಿಯಾಗುತ್ತಿವೆ. ಇದಕ್ಕೆ ಅನುಗುಣವಾಗಿ ಜಿಲ್ಲಾ ಪೊಲೀಸ್ ಇಲಾಖೆಯ ಬಿರುಸಿನ ತನಿಖಾ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಪತ್ತೆ ಹಚ್ಚಿ, ಆರೋಪಿಗಳನ್ನು ಬಂಧಿಸುವ ಕೆಲಸವಾಗುತ್ತಿದೆ. ಮತ್ತೊಂದೆಡೆ ಮಕ್ಕಳ ರಕ್ಷಣಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪರಸ್ಪರ ಸಮನ್ವಯತೆಯ ಜಾಗೃತಿ ಕಾರ್ಯಕ್ರಮಗಳಿಂದ ಪ್ರಕರಣಗಳ ವರದಿಯಾಗುತ್ತಿದ್ದಂತೆ ಸ್ವಯಂ ಪ್ರೇರಣೆಯಿಂದ ದೂರು ಸಲ್ಲಿಸಿ, ಕಾನೂನು ಹೋರಾಟ ನಡೆಸುವಂತಹ ವಾತಾವರಣವು ವ್ಯಾಪಕವಾಗಿ ಕಂಡು ಬರುತ್ತಿದೆ.