ಗ್ರಾಮೀಣ ಭಾಗದಲ್ಲೂ ಸಮಸ್ಯೆ: ಶಿಡ್ಲಘಟ್ಟ ತಾಲೂಕಿನ 33 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಸಂಖ್ಯೆ 50ಕ್ಕೆ ಹೆಚ್ಚಲಿದೆ. ತಾಲೂಕಿನ ಚೀಮಂಗಲ, ವಲ್ಲಪನಹಳ್ಳಿ, ಹೇಮಾರ್ಲಹಳ್ಳಿ, ಗಂಭೀರನಹಳ್ಳಿ, ಜಂಗಮಕೋಟೆ, ಭಕ್ತರಹಳ್ಳಿ, ಪಲಿಚೇರ್ಲು, ಮುಗಿಲಡಿಪಿ, ತಾದೂರು ಗ್ರಾಮಗಳಿಗೆ ಖಾಸಗಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಪೂರೈಸುತ್ತಾ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆಯಾದರೂ ಮುಂದಿನ ದಿನಗಳಲ್ಲಿ ಮತ್ತಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿದೆ.