ಕೈಗಾರಿಕಾಭಿವೃದ್ಧಿ ನೋಟೀಸ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ರೈತರು

ಶಿಡ್ಲಘಟ್ಟ ತಾಲೂಕಿನ ವ್ಯಾಪ್ತಿಯಲ್ಲಿ ಕೈಗಾರಿಕಾಭಿವೃದ್ಧಿ ಪ್ರದೇಶಕ್ಕೆ ಜಮೀನು ಸ್ವಾಧೀನಪಡಿಸಿಕೊಳ್ಳಲಿರುವ ರೈತರಿಗೆ ನೀಡಿದ ನೋಟಿಸ್‌ ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಶಿಡ್ಲಘಟ್ಟ ತಾಲೂಕಿನ ವ್ಯಾಪ್ತಿಯಲ್ಲಿ ಕೈಗಾರಿಕಾಭಿವೃದ್ಧಿ ಪ್ರದೇಶಕ್ಕೆ ಜಮೀನು ಸ್ವಾಧೀನಪಡಿಸಿಕೊಳ್ಳಲಿರುವ ರೈತರಿಗೆ ನೀಡಿದ ನೋಟಿಸ್‌ ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.
Published on

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯ ೧೩ ಹಳ್ಳಿಗಳ ಕೈಗಾರಿಕಾಭಿವೃದ್ಧಿ ಪ್ರದೇಶಕ್ಕೆ ಜಮೀನು ಸ್ವಾಧೀನಪಡಿಸಿಕೊಳ್ಳಲಿರುವ ರೈತರಿಗೆ ನೀಡಿದ ನೋಟಿಸ್ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೆಐಎಡಿಬಿ ಸಭಾಂಗಣದಲ್ಲಿ . ರಿಂದ .೧೦ ರವರೆಗೆ ಭೂ ಪರಿಹಾರ ನಿಗದಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ವಿಶೇಷ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಕೈಗೊಳ್ಳಲಾಗಿದೆ. ಇದಕ್ಕೆ ನಿಗದಿತ ದಿನದಂದು ಜಮೀನಿನ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬೇಕು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ಈ ಭೂ ಸ್ವಾಧೀನ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ಬಣ) ನೋಟಿಸ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು. ಸಾಮೂಹಿಕವಾಗಿ ಕಾಗದಕ್ಕೆ ಬೆಂಕಿ ಹಾಕಿ, ಧಿಕ್ಕಾರದ ಘೋಷಣೆಗಳನ್ನು ಕೂಗಲಾಯಿತು. ಯಾವುದೇ ಕಾರಣಕ್ಕೂ ಪ್ರಕ್ರಿಯೆ ಮುಂದುವರೆಸಲು ಅವಕಾಶ ನೀಡುವುದಿಲ್ಲ. ಮುಂಬರುವ ದಿನಗಳಲ್ಲಿ ಹೋರಾಟದ ತೀವ್ರತೆಯನ್ನು ಎದುರಿಸಬೇಕಾಗುತ್ತದೆ ಎಂದು ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net