ಬೆಂಗಳೂರು ಬೈಕ್‌ ರ್ಯಾಲಿ ಹೋರಾಟಕ್ಕೆ ಕರೆ ನೀಡಿದ ರೈತ ಸಂಘಟನೆಗಳು

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯಲ್ಲಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥಸ್ವಾಮೀಜಿ, ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯಲ್ಲಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥಸ್ವಾಮೀಜಿ, ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.
Published on

ಚಿಕ್ಕಬಳ್ಳಾಪುರ:ಬಲವಂತದಿಂದ ಜಮೀನು ಸ್ವಾಧೀನಪಡಿಸಿಕೊಳ್ಳುವ ರೈತ ವಿರೋಧಿ ಧೋರಣೆಯನ್ನು ಸರ್ಕಾರ ಕೈ ಬಿಡಬೇಕುಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತಭವನದ ಮುಂಭಾಗ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಸರ್ಕಾರವೇ ರಿಯಲ್‌ ಎಸ್ಟೇಟ್‌ ಉದ್ದಿಮೆಗೆ ಇಳಿದು ಬಿಟ್ಟಿದೆ. ಕೈಗಾರಿಕಾಭಿವೃದ್ಧಿ ಪ್ರದೇಶಮಂಡಳಿ ಹೆಸರಿನಲ್ಲಿ ರೈತರ ಫಲವತ್ತತೆಯ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.ಬಡವರಿಂದ ಕಿತ್ತುಕೊಂಡು ಉದ್ದಿಮೆಗಳಿಗೆ ಕೊಡುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಈಗಲಾದರೂರೈತ ವಿರೋಧಿ ಧೋರಣೆಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾಎನ್.ಭಾಸ್ಕರ್‌ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿಮಾಜಿ ಶಾಸಕ ಎಂ.ರಾಜಣ್ಣ, ದಸಂಸನ ರಾಜ್ಯ ಸಂಚಾಲಕ ಕೆ.ಸಿ.ರಾಜಕಾಂತ್‌, ರೈತ ಸಂಘದ ರಾಜ್ಯಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಹೋರಾಟಗಾರರಾದ ತಿಪ್ಪೇನಹಳ್ಳಿ ನಾರಾಯಣಸ್ವಾಮಿ,ಮಂಜುನಾಥ್‌ ರೆಡ್ಡಿ, ಆನಂದ್‌ ಗೌಡ, ಮತ್ತಿತರರು ಇದ್ದರು.

ಇನ್ನೂ ಭೂ ಸ್ವಾಧೀನಪ್ರಕ್ರಿಯೆ ಕೈ ಬಿಡದಿದ್ದಲ್ಲಿ ಜೂ.೫ ರಂದು ಬೆಂಗಳೂರಿಗೆ ೫ ಸಾವಿರ ಬೈಕ್‌ ಗಳೊಂದಿಗೆ ರ್ಯಾಲಿನಡೆಸಲಾಗುತ್ತಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆನೀಡಿದ್ದಾರೆ. ೬೬ ನೇ ದಿನದ ಧರಣಿಯಲ್ಲಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net