ಸೋಮವಾರದಿಂದ ಪ್ರಾರಂಭವಾಗುವ ಸಂಗೀತೋತ್ಸವವು ಜು.30(ಗುರುವಾರ)ರ ಬೆಳಗ್ಗೆ 6ಕ್ಕೆ ಮುಕ್ತಾಯವಾಗುತ್ತದೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕಲಾವಿದರೊಂದಿಗೆ ನಾಡಿನ ಪ್ರಸಿದ್ಧ ಸಂಗೀತಗಾರರು ಭಾಗವಹಿಸುವರು. ಕರ್ನಾಟಕ ಸೇರಿದಂತೆ ನೆರೆಯ ಆಂಧ್ರ, ತಮಿಳುನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಜನಾ ಭಕ್ತರ ತಂಡಗಳು ಭಾಗವಹಿಸಲಿದ್ದು, ಈ ಮೂರು ದಿನಗಳವರೆಗೆ ಸಾಮೂಹಿಕ ಭಜನೆ, ನಾದಸ್ವರ, ಹರಿಕಥೆ, ಬುರ್ರಕಥೆ, ಸಂಗೀತ ಕಛೇರಿ, ಭರತನಾಟ್ಯ, ಕಥಾಕೀರ್ತನೆ, ವೀಣಾವಾದನ, ಕೊಳಲುವಾದನ, ವೀರಗಾಸೆ, ಡೊಳ್ಳುಕುಣಿತ, ಪಂಡರಿ ಭಜನೆ, ಕೋಲಾಟ, ತೊಗಲುಬೊಂಬೆ ಇತ್ಯಾದಿ ನಾನಾ ಪ್ರಕಾರದ ಕಲೆಗಳು ತಾತಯ್ಯನವರಿಗೆ ಸಮರ್ಪಣೆಯಾಗಲಿದೆ.