ಕ್ಷೇತ್ರ ಎಸ್ಎಫ್ಐ ಮುಖಂಡ ಸೋಮಶೇಖರ್ ಮಾತನಾಡಿ, ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಬೇಕು ಹಾಗೂ ಶಾಲೆಯ ಪಡಿತರ ಪದಾರ್ಥಗಳು, ಪೌಷ್ಟಿಕ ಆಹಾರ, ಬಾಳೆಹಣ್ಣು, ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿರುವ ಮುಖ್ಯ ಶಿಕ್ಷಕ ವಿ.ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.