ಸತ್ಯಸಾಯಿ ಸಂಸ್ಥೆಯಲ್ಲಿ ಶೈಕ್ಷಣಿಕ ಮೌಲ್ಯಗಳ ಅಂತಾರಾಷ್ಟ್ರೀಯ ಸಮ್ಮೇಳನ

ಸತ್ಯಸಾಯಿ ಸಮ್ಮೇಳನದಲ್ಲಿಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹಾಗೂ ಸದ್ಗುರು ಶ್ರೀ ಮಧುಸೂದನ ಸಾಯಿ
ಸತ್ಯಸಾಯಿ ಸಮ್ಮೇಳನದಲ್ಲಿಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹಾಗೂ ಸದ್ಗುರು ಶ್ರೀ ಮಧುಸೂದನ ಸಾಯಿ
Published on

ಚಿಕ್ಕಬಳ್ಳಾಪುರ: ಭಾರತೀಯ ಸಂಸ್ಕೃತಿಯ ಗುರುಶಿಷ್ಯ ಪರಂಪರೆಯ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯದಯಶಸ್ವಿ ನಿರ್ವಹಣೆಯು ಶ್ಲಾಘನೀಯ ಎಂದು ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿನ ಸತ್ಯ ಸಾಯಿ ಪ್ರೇಮಾಮೃತಂ ಸಭಾಭವನದಲ್ಲಿ ಕೈಗೊಂಡಿದ್ದ 'ಶೈಕ್ಷಣಿಕ ಮೌಲ್ಯಗಳು' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದಅವರು, ಮೌಲ್ಯಾಧಾರಿತ ಶಿಕ್ಷಣದ ಮಹತ್ವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾರುವ ಉದ್ದೇಶದಸಮ್ಮೇಳನಗಳ ಆಯೋಜನೆಯು ಶ್ಲಾಘನೀಯ ಎಂದರು.

ಸದ್ಗುರು ಶ್ರೀ ಮಧುಸೂದನ ಸಾಯಿಪ್ರೌಢಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ಒಳ್ಳೆಯವರಾಗಿ, ಒಳ್ಳೆಯದನ್ನು ನೋಡಿ, ಒಳ್ಳೆಯ ಕೆಲಸ ಮಾಡಿಹೆಸರಿನ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಇದೇ ವೇಳೆ ಮೌಲ್ಯ ಶಿಕ್ಷಣಕ್ಕೆ ಸಂಬಂಧಿಸಿದ 'ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ವ್ಯಾಲ್ಯೂಸ್ ಎಜುಕೇಶನ್' ವೆಬ್ಸೈಟ್ಗೂ ಚಾಲನೆ ನೀಡಿದರು.

ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ32 ದೇಶಗಳ ಶಿಕ್ಷಣ ತಜ್ಞರು ಹಾಗೂ 19 ವಿಶ್ವವಿದ್ಯಾಲಯಪ್ರತಿನಿಧಿಗಳು ಭಾಗವಹಿಸಿದ್ದರು. "ಮಾನವರು ಮಾನವರಾಗಬೇಕುಮೌಲ್ಯಗಳ ಮೂಲಕ ಒಂದು ಪಯಣ" ಎಂಬ ಧ್ಯೇಯವಾಕ್ಯದಡಿ ನಡೆದ ವಿವಿಧ ಗೋಷ್ಠಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಸಮಾಜ ಪರಿವರ್ತನೆಯಲ್ಲಿ ಶಿಕ್ಷಣದ ಪಾತ್ರದ ಕುರಿತು ಚರ್ಚೆಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net