ನಾಮಕರಣಕ್ಕೆ ಹೋಗುತ್ತಿದ್ದ ವೇಳೆ ಅಪಘಾತ, ಇಬ್ಬರು ಬಲಿ ಪಡೆದ ಲಾರಿ

ನುಜ್ಜುಗುಜ್ಜಾದ ಇನ್ನೋವಾ ಕಾರು
ನುಜ್ಜುಗುಜ್ಜಾದ ಇನ್ನೋವಾ ಕಾರು
Published on
ಚಿಕ್ಕಬಳ್ಳಾಪುರ: ಟಿಪ್ಪರ್ ಲಾರಿ-ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ
ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ-ಚೇಳೂರು ರಸ್ತೆಯಲ್ಲಿ ಸಂಭವಿಸಿದೆ.
ಬಾಗೇಪಲ್ಲಿಯ ನಾಗರಾಜ್‌ರೆಡ್ಡಿ (25), ಅನಿತಾ (24) ಮೃತರು. ಅರವಿಂದ್ (17) ಮತ್ತು ಪ್ರಗತಿ (14) ಗಾಯಾಳುಗಳು. ಇನ್ನೋವಾ ಕಾರು ಬಾಗೇಪಲ್ಲಿಯಿಂದ ಚಿಂತಾಮಣಿಗೆ ಬರುತ್ತಿತ್ತು. ಇದೇ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಚಿಂತಾಮಣಿಯಲ್ಲಿನ ಸಂಬಂಧಿಕರೊಬ್ಬರ ಮನೆಯಲ್ಲಿ ಆಯೋಜಿಸುತ್ತಿದ್ದ ನಾಮಕರಣಕ್ಕೆ ಬರುತ್ತಿದ್ದರು. ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಚಾಲಕನು ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಮಾಡಬೇಕಾಯಿತು. ಗಾಯಾಳುಗಳನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದಿಬ್ಬೂರ ಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net