ಚಿಕ್ಕಬಳ್ಳಾಪುರ: ಗಣಿಗಾರಿಕೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸೂರಿನ ರಮೇಶ್ (38) ಮೃತ. ಇಲ್ಲಿನ ಕಣಿವೆನಾರಾಯಣಪುರ ಕಲ್ಲು ಕ್ವಾರಿಯಿಂದ ನಂದಿ ಕ್ರಾಸ್ ಮಾರ್ಗದಲ್ಲಿ ಲಾರಿಯಲ್ಲಿ ಕಲ್ಲು ಸಾಗಿಸುತ್ತಿದ್ದಾಗ ಗಣಿಗಾರಿಕೆ ಇಲಾಖೆ ಅಧಿಕಾರಿ ಸವಿತಾ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿದೆ. ನಿಯಮ ಪಾಲನೆ ಬಗ್ಗೆ ಪ್ರಶ್ನಿಸಲು ಮುಂದಾಗುತ್ತಿದ್ದಂತೆ ರಮೇಶ್ ಲಾರಿ ಬಿಟ್ಟು ಓಡಿ ಹೋಗಲು ಯತ್ನಿಸಿದ್ದಾನೆ. ಅದೇ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಚಾಲಕ ಮೃತಪಟ್ಟಿದ್ದಾನೆ. ನಂದಿಗಿರಿ ಧಾಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟಿಪ್ಪರ್, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.