ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ

ಮುದ್ದೇನಹಳ್ಳಿಯಲ್ಲಿನ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಮುದ್ದೇನಹಳ್ಳಿಯಲ್ಲಿನ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
Published on

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯಲ್ಲಿನ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಮಾನ್ಯತಾ ಮಂಡಳಿಯ (ಎನ್‌ಎಬಿಎಚ್)‌ ಮಾನ್ಯತೆ ಸಿಕ್ಕಿದೆ.

ರೋಗಿಗಳ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆ ಹಾಗೂ ಆಸ್ಪತ್ರೆ ನಿರ್ವಹಣೆಸೇರಿದಂತೆ ರಾಷ್ಟ್ರೀಯ ಮಾನದಂಡಗಳನ್ನು ಪರಿಣಾಮಕಾರಿಯಾಗಿಪಾಲಿಸುತ್ತಿರುವುದರ ವರದಿಯನ್ನಾಧಾರಿಸಿ ಮಾನ್ಯತೆ ನೀಡಲಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ದುಬಾರಿಆರೋಗ್ಯ ಸೇವೆಯನ್ನು ಉಚಿತವಾಗಿ ನೀಡುತ್ತಿರುವ ಕೆಲಸಕ್ಕೆ ಮತ್ತಷ್ಟು ಪ್ರೋತ್ಸಾಹಸಿಕ್ಕಿದಂತಾಗಿದೆ.

ಸದ್ಗುರು ಶ್ರೀ ಮಧುಸೂದನ ಸಾಯಿ ಮಾರ್ಗದರ್ಶನದಲ್ಲಿ ಕಳೆದ 2025 ಜನವರಿಯಲ್ಲಿ ಆರಂಭವಾದ ಸಂಸ್ಥೆಯು ಒಂದು ವರ್ಷದ ನಿರಂತರ ಪರಿಶ್ರಮ, ಶಿಸ್ತು

ಮತ್ತು ತಂಡದ ಪ್ರಯತ್ನದ ಫಲವಾಗಿ ಮಾನ್ಯತೆ ಪಡೆದುಕೊಂಡಿದೆ.

ದೇಶದಲ್ಲಿರುವ 80,000 ರಿಂದ 90,000 ಆಸ್ಪತ್ರೆಗಳ ಪೈಕಿ ಕೇವಲ ಶೇ.1.4 ಆಸ್ಪತ್ರೆಗಳುಮಾತ್ರ ಸಂಪೂರ್ಣ ಮಾನ್ಯತೆ, ಶೇ.3 ರಷ್ಟುಆಸ್ಪತ್ರೆಗಳು ಮಾತ್ರ ಆರಂಭಿಕ ಹಂತದ ಮಾನ್ಯತೆ ಹೊಂದಿವೆ. ಸಂಪೂರ್ಣ ಉಚಿತ ವೈದ್ಯಕೀಯ ಸೇವೆಗಳನ್ನು ನೀಡುವ ಆಸ್ಪತ್ರೆಗಳ ಸಂಖ್ಯೆ ತೀರಾ ಕಡಿಮೆ. ಇದರನಡುವೆ ನಮ್ಮ ಸಂಸ್ಥೆಗೆಆರಂಭಿಕತ ಹಂತದ ಮಾನ್ಯತೆ ದೊರಕಿರುವುದು ಮೊದಲ ಹೆಜ್ಜೆಯಾಗಿದೆ. ಶೀಘ್ರದಲ್ಲೇ ಸಂಪೂರ್ಣವಾಗಿಎನ್‌ ಎಬಿಎಚ್‌ ಮಾನ್ಯತೆ ಪಡೆಯುವ ವಿಶ್ವಾಸಇದೆ ಎಂದು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೆಡಿಕಲ್ಸೂಪರಿಂಟೆಂಡೆಂಟ್ಡಾ. ಪದ್ಮಶ್ರೀ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net