

ಚಿಕ್ಕಬಳ್ಳಾಪುರ: ವಿಜಯವಾಡದಲ್ಲಿ ಆಂಧ್ರದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುರೊಂದಿಗೆ ಕರ್ನಾಟಕದ ಬಯಲು ಸೀಮೆಯ ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೃಷ್ಣಾ ನದಿ ನೀರಿನ ಹಂಚಿಕೆಯ ವಿಚಾರವಾಗಿ ಸಂಸದ ಡಾ ಕೆ.ಸುಧಾಕರ್ ಚರ್ಚಿಸಿದ್ದಾರೆ.
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ದೀರ್ಘಕಾಲದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷ್ಣಾ ನದಿ ನೀರಿನ ಹಂಚಿಕೆಯ ಯೋಜನೆಯು ಸಹಕಾರಿ ಎನ್ನುವುದನ್ನು ಸಿಎಂ ಗಮನಕ್ಕೆ ತಂದಿದ್ದಾರೆ.
ಇದೇ ವೇಳೆ ಅವಿಭಜಿತ ಆಂಧ್ರಪ್ರದೇಶದಲ್ಲಿ 1996-97ರ ಅವಧಿಯಲ್ಲಿ ಅವರು ಜಾರಿಗೆ ತಂದ ದೂರದೃಷ್ಟಿಯ ಸೂಕ್ಷ್ಮ ನೀರಾವರಿ (Micro Irrigation) ಯೋಜನೆಗಳು, ಹೈದರಾಬಾದ್ ಅನ್ನು ಜಾಗತಿಕ ಮಟ್ಟದ ಐಟಿ ಹಬ್ ಆಗಿ ರೂಪಿಸಿರುವುದು, ಅಮರಾವತಿ ಅಭಿವೃದ್ಧಿಯ ದೂರದೃಷ್ಟಿಯ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.