ಮಂಚೇನಹಳ್ಳಿಯಲ್ಲಿ ತಾಲೂಕು ಆಡಳಿತ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಕೈಗೊಳ್ಳಲಾಗಿತ್ತು. ಇದರಲ್ಲಿ ತಹಸೀಲ್ದಾರ್ ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಉಲ್ಟಾ ಹಾರಿರುವುದು ಕಂಡು ಬಂದಿದೆ. ಮೇಲಕ್ಕೆ ಹಸಿರು, ಬಿಳಿ ಹಾಗೂ ಕೇಸರಿ ಬಣ್ಣ ಕೆಳಕ್ಕೆ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಶಿಷ್ಟಾಚಾರ ಉಲ್ಲಂಘನೆ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನವಾಗುತ್ತಿರುವುದರ ಬಗ್ಗೆ ಗಮನ ಸೆಳೆದಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಕರು ಧ್ವಜವನ್ನು ಕೆಳಗೆ ಇಳಿಸಿದ್ದಾರೆ. ಬಳಿಕ ಸರಿಪಡಿಸಿ ಮತ್ತೆ ಧ್ವಜಾರೋಹಣ ನೆರವೇರಿಸಿದ್ದಾರೆ. ಇದರ ಯಡವಟ್ಟಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಿಡಿಸಿದರು. ಅಚಾತುರ್ಯದಿಂದ ತಪ್ಪಾಗಿ ಹೋಗಿದೆ ಎಂಬುದಾಗಿ ಸಮರ್ಥಿಸಿಕೊಳ್ಳಲು ಮುಂದಾದ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಷ್ಟ್ರಧ್ವಜದ ವಿಚಾರದಲ್ಲಿ ಪ್ರಜ್ಞೆ ತಪ್ಪಿ ಕೆಲಸ ಮಾಡುವುದು ಸರಿಯೇ? ಬೈ ಮಿಸ್ ತಪ್ಪಾಗಿದೆ ಎಂದರೆ ತಪ್ಪು ಸರಿ ಹೋಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.