ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನಾ ದೃಢೀಕರಣ ಪತ್ರ ಸಲ್ಲಿಸಲು ಆದೇಶ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಕೈಗೊಂಡಿದ್ದ ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, ಜಿ.ಪಂ.ಸಿಇಒ ಡಾ ನವೀನ್ ಭಟ್ ಮತ್ತಿತರರು ಇದ್ದರು.  .
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಕೈಗೊಂಡಿದ್ದ ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, ಜಿ.ಪಂ.ಸಿಇಒ ಡಾ ನವೀನ್ ಭಟ್ ಮತ್ತಿತರರು ಇದ್ದರು. .
Published on
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ ನೇಮಕಾತಿಗೆ ಪೊಲೀಸ್ ಇಲಾಖೆಯ ಪರಿಶೀಲನಾ ಪ್ರಮಾಣ ಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಕೈಗೊಂಡಿದ್ದ ಆ‌ರ್.ಟಿ.ಇ 2009 ಕುರಿತು ಅಹವಾಲು ಸ್ವೀಕಾರ ಸಭೆಯಲ್ಲಿ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅತಿಥಿ ಶಿಕ್ಷಕರ ನೇಮಕಾತಿಗೆ ಮೊದಲು ಚಾರಿತ್ರ್ಯದ ಪೊಲೀಸ್‌ ದೃಢೀಕರಣ ಪಡೆಯಲು ಸೂಚಿಸಿದ್ದಾರೆ.
ಕೆಲವೆಡೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಪೊಲೀಸ್ ಪ್ರಕರಣಗಳಲ್ಲಿ ಸಿಲುಕಿರುವ ಗೂಂಡಾಗಳು ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕರಣಗಳು ವರದಿಯಾಗಿವೆ. ಇವುಗಳ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಅನರ್ಹರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸಬಾರದು. ಒಂದು ವೇಳೆ ಕಂಡು ಬಂದಲ್ಲಿ ಆಯೋಗವೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net