ಸಾಮಾಜಿಕ ಕಳಕಳಿಯೊಂದಿಗೆ ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಿ

ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರ ಸೇವಾ ದಳದ 8 ದಿನಗಳ ವಸತಿ ಶಿಬಿರವನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಡೆಪ್ಯುಟಿ ಛೇರ್ಮನ್​, ಶಾಸಕ ಬಿ.ಆರ್​.ಪಾಟೀಲ್​, ತಹಸೀಲ್ದಾರ್​ ಗಗನಸಿಂಧು ಉದ್ಘಾಟಿಸಿದರು. ತಾಪಂ ಇಒ ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್​, ಬಿಎಂವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ವಿ.ಮುನೇಗೌಡ, ಕಾರ್ಯದರ್ಶಿ ಎಲ್​.ಕಾಳಪ್ಪ, ಹಂಪಿ ವಿವಿ ವಿಶ್ರಾಂತ ಉಪಕುಲಪತಿ ಡಾ.ಎ.ಮುರಿಗೆಪ್ಪ, ಸಮಾಜವಾದಿ ಅಧ್ಯಯನ ಕೇಂದ್ರದ ಬಾಪು ಹೆದ್ದೂರ ಶೆಟ್ಟಿ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಾಮಾಜಿಕ ಕಳಕಳಿಯೊಂದಿಗೆ ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಿ
ಶಿಡ್ಲಘಟ್ಟ: ವಿದ್ಯಾರ್ಥಿಗಳು ಅಂಕಗಳಿಗಷ್ಟೇ ಸೀಮಿತವಾಗದೆ, ಸಾಮಾಜಿಕ ಕಳಕಳಿ, ಸೌಹಾರ್ದತೆಯ ಗುಣ ಬೆಳೆಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯ ಎತ್ತಿಹಿಡಿಯಲು ವಿದ್ಯಾರ್ಥಿ ದೆಸೆಯಿಂದಲೇ ಸಿದ್ಧರಾಗಬೇಕು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಡೆಪ್ಯುಟಿ ಛೇರ್ಮನ್​ ಶಾಸಕ ಬಿ.ಆರ್​.ಪಾಟೀಲ್​ ತಿಳಿಸಿದರು.
ತಾಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಬಿಎಂವಿ ಎಜುಕೇಷನ್​ ಟ್ರಸ್ಟ್​ ಹಾಗೂ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರ ಸೇವಾದಳದ 8 ದಿನಗಳ ವಸತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ದೇಶ ಪ್ರೇಮದ ಜತೆಗೆ ಎಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಂಡು, ಜಾತಿ- ಭೇದ ಮರೆತು ಮಾನವೀಯತೆಯಿಂದ ಬದುಕಿದಾಗ ಸದೃಢ ಭಾರತ ನಿಮಾರ್ಣ ಸಾಧ್ಯ. ಶಾಲಾ ಹಂತದಿಂದಲೇ "ನಾವೆಲ್ಲರೂ ಭಾರತೀಯರು' ಎಂಬ ವಿಶಾಲ ಮನೋಭಾವ ರೂಢಿಸಿಕೊಳ್ಳುವುದು ಅಗತ್ಯ ಎಂದರು.
ತಹಸೀಲ್ದಾರ್​ ಗಗನಸಿಂಧು ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಕ್ರೀಡೆ, ಕಲೆ, ಸಂಗೀತ, ಸಾಮಾಜಿಕ ಸೇವೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ, ಶಿಸ್ತು, ಸೃಜನಶೀಲತೆ ಹೆಚ್ಚುತ್ತದೆ. ಜತೆಗೆ ಶೈಕ್ಷಣಿಕ ಒತ್ತಡ ಕಡಿಮೆ ಮಾಡಿ, ದೈಹಿಕ, ಮಾನಸಿಕ ಆರೋಗ್ಯ ಸುಧಾರಿಸುವುದರ ಜತೆಗೆ ಪ್ರತಿಭೆಗಳನ್ನು ಹೊರತರುತ್ತವೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ, ಬಿಎಂವಿ ಶಾಲೆಯ ಹಿರಿಯ ವಿದ್ಯಾರ್ಥಿ ನಾಗರಾಜ್​ ತನ್ನ ತಂದೆ ರಂಗಭೂಮಿ ಕಲಾವಿದ ಮುನಿಯಪ್ಪ ಸ್ಮರಣಾರ್ಥ ನಿರ್ಮಿಸಿಕೊಟ್ಟ ಬಯಲು ರಂಗಭೂಮಿ ಸ್ಟೀಲ್​ ಛಾವಣಿಯನ್ನು ಉದ್ಘಾಟಿಸಲಾಯಿತು.
ತಾಪಂ ಇಒ ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್​, ಬಿಎಂವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ವಿ.ಮುನೇಗೌಡ, ಕಾರ್ಯದರ್ಶಿ ಎಲ್​.ಕಾಳಪ್ಪ, ಹಂಪಿ ವಿವಿ ವಿಶ್ರಾಂತ ಉಪಕುಲಪತಿ ಡಾ.ಎ.ಮುರಿಗೆಪ್ಪ, ಸಮಾಜವಾದಿ ಅಧ್ಯಯನ ಕೇಂದ್ರದ ಬಾಪು ಹೆದ್ದೂರ ಶೆಟ್ಟಿ, ಪ್ರೊ.ಹನುಮಂತ, ಜಿ.ವಿ.ಸುಂದರ್​, ತೋಟಗಾರಿಕಾ ಇಲಾಖೆ ನಿವೃತ್ತ ಹಿರಿಯ ಸಹಾಯಕ ನಿರ್ದೇಶಕ ಸಂತೆ ನಾರಾಯಣಸ್ವಾಮಿ, ಚಿದಾನಂದಮೂರ್ತಿ, ತರಬೇತುದಾರರಾದ ಬಾಬಾ ಸಾಹೇಬ್​, ಚಂದನ್​, ಸಾಗರ್​ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net